ಭಾರತರತ್ನಕ್ಕೆ ಡಾ.ರಾಜ್‌ ಹೆಸರು ಶಿಫಾರಸು ಮಾಡಿ; ಅಭಿಮಾನಿಗಳ ಮನವಿ! …

ಭಾರತರತ್ನಕ್ಕೆ ಡಾ.ರಾಜ್‌ ಹೆಸರು ಶಿಫಾರಸು ಮಾಡಿ; ಅಭಿಮಾನಿಗಳ ಮನವಿ! …

ಕನ್ನಡ ನಾಡು, ನುಡಿಗಾಗಿ ತಮ್ಮದೇ ಕೊಡುಗೆ ನೀಡಿರುವ ವರನಟ ಡಾ.ರಾಜ್‌ಕುಮಾರ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಅಖಿಲ ಕರ್ನಾಟಕ ಶಿವರಾಜ್‌ಕುಮಾರ್‌ ಮತ್ತು ರಾಜರತ್ನ ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿದರು. ಕನ್ನಡದ ನಾಡು-ನುಡಿಯನ್ನು ಮುಗಿಲೆತ್ತರಕ್ಕೇರಿಸಿದ ಪದ್ಮಭೂಷಣ ಡಾ.ರಾಜ್‌ಕುಮಾರ್‌ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಬೇಕು. ರಾಜ್‌ಕುಮಾರ್‌ ತಮ್ಮ ಪಾತ್ರಗಳ ಮೂಲಕ ಅನೇಕ ಸಾಮಾಜಿಕ ಬದಲಾವಣೆಗಳನ್ನು ತಂದಿದ್ದಾರೆ.

ಕನ್ನಡದ ಕೀರ್ತಿ ಪತಾಕೆಯನ್ನು ದೇಶ-ವಿದೇಶದಲ್ಲಿ ಹಾರಿಸಿದ್ದಾರೆ. ಎಲ್ಲಾ ರೀತಿಯ ಪಾತ್ರಗಳ ಅಭಿನಯದಲ್ಲಿ ಯಶಸ್ವಿಯಾಗಿರುವ ವಿಶ್ವದ ಏಕೈಕ ನಟನೆಂಬ ಖ್ಯಾತಿಯನ್ನು ರಾಜ್‌ಕುಮಾರ್‌ ಪಡೆದಿದ್ದಾರೆ ಎಂದು ಮನವಿಯಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್‌ ತಿಳಿಸಿದ್ದಾರೆ.

ಇದೇ ವೇಳೆ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ರಾಜ್‌ಕುಮಾರ್‌ ಹೆಸರು ನಾಮಕರಣ ಮಾಡಬೇಕು ಹಾಗೂ ಚಿತ್ರರಂಗದಲ್ಲಿ 30 ವರ್ಷಕ್ಕಿಂತ ಹೆಚ್ಚು ಕಾಲದಿಂದ ಕನ್ನಡದ ಸೇವೆ ಮಾಡುತ್ತಿರುವ ಶಿವರಾಜ್‌ಕುಮಾರ್‌ ಅವರ ಹೆಸರನ್ನು ಪದ್ಮಶ್ರಿ ಪ್ರಶಸ್ತಿಗೆ ಶಿಫಾರಸು ಮಾಡಬೇಕು ಎಂದು ಕೋರಲಾಯಿತು. ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗಿದೆ.

Post a Comment

Your email address will not be published. Required fields are marked *

error: Content is protected !!